Jonah 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
Kannada BSI Bible 2016
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.
Kannada Bible (KNCL) BSI 2016
ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”