Jonah 3:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
Kannada BSI Bible 2016
ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
Kannada Bible (KNCL) BSI 2016
ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.