Jonah 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
Kannada BSI Bible 2016
ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.
Kannada Bible (KNCL) BSI 2016
ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.