Jonah 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಆ ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರುತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
Kannada BSI Bible 2016
ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
Kannada Bible (KNCL) BSI 2016
ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.