Jonah 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
Kannada BSI Bible 2016
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.
Kannada Bible (KNCL) BSI 2016
ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.