Jonah 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: “ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
Kannada BSI Bible 2016
ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನಾಗಿ - ಜನ ಪಶು ಮಂದೆ ಹಿಂಡು ಇವುಗಳು ಏನೂ ರುಚಿನೋಡದಿರಲಿ; ತಿನ್ನದಿರಲಿ, ಕುಡಿಯದಿರಲಿ;
Kannada Bible (KNCL) BSI 2016
ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.