Jonah 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
Kannada BSI Bible 2016
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
Kannada Bible (KNCL) BSI 2016
ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”