Jonah 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, “ನೀನು ಆ ಸೋರೆ ಗಿಡಕ್ಕಾಗಿ ಏನೂ ಮಾಡಲಿಲ್ಲ. ಅದು ಬೆಳೆಯುವಂತೆ ನೀನು ಮಾಡಲಿಲ್ಲ. ಅದು ರಾತ್ರಿಯಲ್ಲಿ ಬೆಳೆಯಿತು. ಮರುದಿನ ಅದು ಸತ್ತಿತ್ತು. ಈಗ ನೀನು ಅದಕ್ಕಾಗಿ ದುಃಖಪಡುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
Kannada BSI Bible 2016
ಆಗ ಕರ್ತನು ಹೇಳಿದ್ದೇನಂದರೆ--ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶನವಾದಂಥ,ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೋವನು - ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
Kannada Bible (KNCL) BSI 2016
ಆಗ ಸರ್ವೇಶ್ವರ: “ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ. ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,