Jonah 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.
Kannada BSI Bible 2016
ದೇವರಾದ ಕರ್ತನು ಒಂದು ಸೋರೇ ಗಿಡವನ್ನು ಎಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು ಅವನ ತಲೆಯ ಮೇಲೆ ನೆರಳುಕೊಟ್ಟು ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದನು: ಯೋನನು ಆ ಸೋರೇ ಗಿಡದ ವಿಷಯವಾಗಿ ಬಹಳ ಸಂತೋಷಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.
Kannada Bible (KNCL) BSI 2016
ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.