Jonah 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಮುಂಜಾನೆ, ದೇವರು ಆ ಗಿಡವನ್ನು ತಿನ್ನಲು ಒಂದು ಹುಳವನ್ನು ಕಳುಹಿಸಿದನು. ಆ ಹುಳವು ಗಿಡವನ್ನು ತಿಂದ ನಿಮಿತ್ತ ಅದು ಬಾಡಿಹೋಗಿ ಸತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.
Kannada BSI Bible 2016
ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು.
Kannada Bible (KNCL) BSI 2016
ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.