Jonah 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
Kannada BSI Bible 2016
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.
Kannada Bible (KNCL) BSI 2016
ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.