Jonah 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರು ಯೋನನಿಗೆ ಹೇಳಿದ್ದೇನೆಂದರೆ, “ಆ ಸೋರೆ ಗಿಡವು ಸತ್ತುಹೋದುದಕ್ಕೆ ನೀನು ಕೋಪಗೊಳ್ಳುವುದು ಸರಿಯೋ?” ಅದಕ್ಕುತ್ತರವಾಗಿ ಯೋನನು, “ಹೌದು! ನಾನು ಕೋಪಗೊಂಡದ್ದು ನಿಜ. ನಾನು ಸಾಯುವಷ್ಟು ಕೋಪಗೊಂಡಿದ್ದೇನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.