Joshua 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನ ಸೇವಕನಾದ ಮೋಶೆಯು ನಿಮಗೆ ಹೇಳಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ವಿಶ್ರಾಂತಿಗಾಗಿ ಒಂದು ದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.
Kannada BSI Bible 2016
ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ನೆನಪುಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಈ ದೇಶವನ್ನು ಕೊಟ್ಟು ವಿಶ್ರಾಂತಿಯನ್ನುಂಟುಮಾಡಿದ್ದಾನೆ.
Kannada Bible (KNCL) BSI 2016
“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’