Joshua 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
Kannada BSI Bible 2016
ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಹೆಂಡರುಮಕ್ಕಳೂ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ಇರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
Kannada Bible (KNCL) BSI 2016
ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,