Joshua 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
Kannada BSI Bible 2016
ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್‌ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಣ್ಯವೂ ಈ ಲೆಬನೋನ್ ಪರ್ವತವೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವದು; ನಿಮ್ಮ ಸೀಮೆಯು ಪಶ್ಚಿಮ ದಿಕ್ಕಿನ ಮಹಾಸಾಗರದವರೆಗೆ ವಿಸ್ತರಿಸಿಕೊಳ್ಳುವದು.
Kannada Bible (KNCL) BSI 2016
ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.