Joshua 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
Kannada BSI Bible 2016
ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.
Kannada Bible (KNCL) BSI 2016
ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.