Joshua 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
Kannada BSI Bible 2016
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.
Kannada Bible (KNCL) BSI 2016
ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.