Joshua 10:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಮಯದಲ್ಲಿ ಅದೋನೀಚೆದೆಕನು ಜೆರುಸಲೇಮಿನ ಅರಸನಾಗಿದ್ದನು. ಯೆಹೋಶುವನು ‘ಆಯಿ’ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮತ್ತು ಅದನ್ನು ಸಂಪೂರ್ಣವಾಗಿ ನಾಶಮಾಡಿದ ಸಂಗತಿಯನ್ನು ಅವನು ಕೇಳಿದ್ದನು. ಜೆರಿಕೊ ಪಟ್ಟಣಕ್ಕೂ ಅದರ ರಾಜನಿಗೂ ಯೆಹೋಶುವನು ಹಾಗೆಯೇ ಮಾಡಿದ್ದನೆಂಬುದನ್ನೂ ಗಿಬ್ಯೋನಿನ ಜನರು ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದಾರೆಂಬುದನ್ನೂ ಅವನು ಕೇಳಿದ್ದನು. ಅವರು ಜೆರುಸಲೇಮಿಗೆ ಅತೀಸಮೀಪದಲ್ಲಿ ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.
Kannada BSI Bible 2016
ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನೂ ಅದರ ಅರಸನನ್ನೂ ತೆಗೆದುಕೊಂಡು ಸಂಹರಿಸಿ ಬಿಟ್ಟನೆಂಬದನ್ನೂ
Kannada Bible (KNCL) BSI 2016
ಯೆಹೋಶುವನು ಆಯಿ ನಗರವನ್ನು ಅದರ ಅರಸನನ್ನು ಹಿಡಿದು ಜೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆ ಸಂಹರಿಸಿಬಿಟ್ಟನೆಂದು ಜೆರುಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.