Joshua 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
Kannada BSI Bible 2016
ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.
Kannada Bible (KNCL) BSI 2016
ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.