Joshua 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.
Kannada BSI Bible 2016
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು
Kannada Bible (KNCL) BSI 2016
ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”