Joshua 10:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.
Kannada BSI Bible 2016
ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್‌ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು
Kannada Bible (KNCL) BSI 2016
ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.