Joshua 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.
Kannada BSI Bible 2016
ಯೆಹೋಶುವನೂ ಇಸ್ರಾಯೇಲ್ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಯೆಹೋಶುವನೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡರು.
Kannada Bible (KNCL) BSI 2016
ಹೀಗೆ ಯೆಹೋಶುವನು ಹಾಗೂ ಇಸ್ರಯೇಲರು ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿದರು. ಕೆಲವರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು.