Joshua 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕತ್ತುಗಳ ಮೇಲೆ ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
Kannada BSI Bible 2016
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
Kannada Bible (KNCL) BSI 2016
ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.