Joshua 10:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು. ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡದ್ದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.
Kannada BSI Bible 2016
ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು.
Kannada Bible (KNCL) BSI 2016
ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.