Joshua 10:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಜನರು ಲಾಕೀಷ್ ಪಟ್ಟಣವನ್ನು ವಶಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಅವರು ಎರಡನೆಯ ದಿನ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡರು. ಇಸ್ರೇಲರು ಆ ಪಟ್ಟಣದಲ್ಲಿದ್ದವರನ್ನೆಲ್ಲಾ ಕೊಂದುಹಾಕಿದರು. ಅವರು ಲಿಬ್ನ ಪಟ್ಟಣಕ್ಕೆ ಮಾಡಿದಂತೆ ಇದಕ್ಕೂ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
Kannada BSI Bible 2016
ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದದರಿಂದ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
Kannada Bible (KNCL) BSI 2016
ಸರ್ವೇಶ್ವರ ಇದನ್ನೂ ಇಸ್ರಯೇಲರ ಕೈಗೊಪ್ಪಿಸಿದರು. ಎಂದೇ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು.