Joshua 10:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.
Kannada BSI Bible 2016
ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.
Kannada Bible (KNCL) BSI 2016
ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.