Joshua 10:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
Kannada BSI Bible 2016
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.
Kannada Bible (KNCL) BSI 2016
ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.