Joshua 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.
Kannada BSI Bible 2016
ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಲ್ಲಿ ಶ್ರೇಷ್ಠವಾಗಿತ್ತು.
Kannada Bible (KNCL) BSI 2016
ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಯೆಹೋಶುವನು ಹಿಂದಿರುಗಿ ಹಾಚೋರನ್ನು ಹಿಡಿದು, ಅದರ ಅರಸನನ್ನು ಖಡ್ಗದಿಂದ ಸಂಹರಿಸಿದನು. ಏಕೆಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ಶಿರಸ್ಸಾಗಿತ್ತು.