Joshua 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.
Kannada BSI Bible 2016
ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅವುಗಳಲ್ಲಿದ್ದ ಪಶುಗಳನ್ನೂ ವಸ್ತುಗಳನ್ನೂ ಕೊಳ್ಳೆ ಹಿಡಿದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲಮಾಡಿದರು. ಒಂದು ಪ್ರಾಣಿಯನ್ನೂ ಉಳಿಸಲಿಲ್ಲ.
Kannada Bible (KNCL) BSI 2016
ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.