Joshua 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಮಾಡಬೇಕೆಂದು ಯೆಹೋವನು ತನ್ನ ಸೇವಕನಾದ ಮೋಶೆಗೆ ಬಹುಕಾಲದ ಹಿಂದೆಯೇ ಹೇಳಿದ್ದನು. ಮೋಶೆಯು ಈ ಕಾರ್ಯವನ್ನು ಮಾಡಲು ಯೆಹೋಶುವನಿಗೆ ಆಜ್ಞಾಪಿಸಿದ್ದನು. ಹೀಗೆ ಯೆಹೋಶುವನು ದೇವರ ಆಜ್ಞೆಯನ್ನು ಪಾಲಿಸಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೆಲ್ಲವನ್ನು ಯೆಹೋಶುವನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.
Kannada BSI Bible 2016
ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ.
Kannada Bible (KNCL) BSI 2016
ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು.