Joshua 11:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
Kannada BSI Bible 2016
ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್‌ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.
Kannada Bible (KNCL) BSI 2016
ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.