Joshua 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇಯೀರಿನ ಹತ್ತಿರವಿರುವ ಹಾಲಾಕ್ ಬೆಟ್ಟದಿಂದ ಹೆರ್ಮೋನ್ ಬೆಟ್ಟದ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಭೂಮಿಯು ಅವನ ಸ್ವಾಧೀನವಾಯಿತು. ಯೆಹೋಶುವನು ಆ ಪ್ರದೇಶದ ಎಲ್ಲ ಅರಸರನ್ನು ಸೆರೆಹಿಡಿದು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
Kannada BSI Bible 2016
ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ತಗ್ಗಿನಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
Kannada Bible (KNCL) BSI 2016
ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು.