Joshua 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
Kannada BSI Bible 2016
ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
Kannada Bible (KNCL) BSI 2016
ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.