Joshua 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.
Kannada BSI Bible 2016
ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.
Kannada Bible (KNCL) BSI 2016
ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.