Joshua 11:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.
Kannada BSI Bible 2016
ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎಲ್ಲಾ ಅರಸರು ಕೂಡಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಇಳುಕೊಂಡರು.
Kannada Bible (KNCL) BSI 2016
ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು.