Joshua 11:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಶುವನು ಮತ್ತು ಅವನ ಎಲ್ಲ ಸೈನಿಕರು ಶತ್ರುಗಳನ್ನು ಬೆರಗುಗೊಳಿಸಿದರು. ಮೇರೋಮ್ ನದಿಯ ಬಳಿಯಲ್ಲಿ ಅವರು ಶತ್ರುಗಳ ಮೇಲೆ ಧಾಳಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.
Kannada BSI Bible 2016
ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ತನ್ನ ಎಲ್ಲಾ ಭಟರೊಡನೆ ಹೊರಟುಹೋಗಿ ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಫಕ್ಕನೆ ಬಿದ್ದನು.
Kannada Bible (KNCL) BSI 2016
ಯೆಹೋಶುವನು ತನ್ನ ಎಲ್ಲ ಯೋಧರೊಡನೆ ಹೊರಟು ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಬಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಶುವನೂ ಅವನ ಸಂಗಡ ಇದ್ದ ಸೈನಿಕರೆಲ್ಲರೂ ಬಂದು ಫಕ್ಕನೆ ಮೇರೋಮ ಜಲಾಶಯದ ಬಳಿಯಲ್ಲಿ ಅವರ ಮೇಲೆ ದಾಳಿಮಾಡಿದರು.