Joshua 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನ ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. ಅರ್ನೋನ್ ನದಿಯಿಂದ ಹೆರ್ಮೋನ್ ಪರ್ವತದವರೆಗಿನ ಪ್ರದೇಶ ಮತ್ತು ಜೋರ್ಡನ್ ಕಣಿವೆಯ ಪೂರ್ವದಿಕ್ಕಿಗೆ ಉದ್ದಕ್ಕೂ ಹಬ್ಬಿರುವ ಪ್ರದೇಶ ಅವರ ವಶಕ್ಕೆ ಬಂತು. ಈ ದೇಶವನ್ನು ತೆಗೆದುಕೊಳ್ಳುವುದಕ್ಕಾಗಿ ಇಸ್ರೇಲರು ಸೋಲಿಸಿದ ಅರಸರ ವಿವರ ಹೀಗಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
Kannada BSI Bible 2016
ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
Kannada Bible (KNCL) BSI 2016
ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ: