Joshua 12:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದರು. ಅವನು ಅರ್ನೋನ್ ನದಿಯ ತೀರದಲ್ಲಿದ್ದ ಅರೋಯೇರ್‌ನಿಂದ ಯಬ್ಬೋಕ್ ನದಿಯವರೆಗಿರುವ ಪ್ರದೇಶವನ್ನು ಆಳುತ್ತಿದ್ದನು. ಅವನ ರಾಜ್ಯವು ಆ ತಗ್ಗು ಪ್ರದೇಶದ ಮಧ್ಯದಿಂದ ಪ್ರಾರಂಭವಾಗುತ್ತಿತ್ತು. ಇದು ಅಮ್ಮೋನಿಯರ ಪ್ರದೇಶಕ್ಕೂ ಮೇರೆಯಾಗಿತ್ತು. ಗಿಲ್ಯಾದಿನ ಅರ್ಧ ಪ್ರದೇಶವು ಸೀಹೋನನ ಆಳ್ವಿಕೆಗೆ ಒಳಗಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು
Kannada BSI Bible 2016
ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
[ಅವರಲ್ಲಿ ಮೊದಲನೆಯವನು] ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನ್ ಎಂಬವನು. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧ ಪ್ರಾಂತವು,
Kannada Bible (KNCL) BSI 2016
ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.