Joshua 12:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:
Kannada BSI Bible 2016
ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.
Kannada Bible (KNCL) BSI 2016
ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.