Joshua 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.
Kannada BSI Bible 2016
ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
Kannada Bible (KNCL) BSI 2016
ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು.