Joshua 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,
Kannada BSI Bible 2016
ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್‌ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್‌ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಯೊರ್ದನ್ ಹೊಳೆಯ ಪಶ್ಚಿಮದಲ್ಲಿ ಲೆಬನೋನ್ ತಗ್ಗಿನಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶ,
Kannada Bible (KNCL) BSI 2016
ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,