Joshua 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
Kannada BSI Bible 2016
ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ.
Kannada Bible (KNCL) BSI 2016
ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.