Joshua 13:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಓಗ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
Kannada BSI Bible 2016
ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಇವುಗಳೇ. ಮೋಶೆಯೇ ಅವರನ್ನು ಜಯಿಸಿ ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
Kannada Bible (KNCL) BSI 2016
ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.