Joshua 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಆಳ್ವಿಕೆಯಲ್ಲಿದ್ದ ಎಲ್ಲ ಊರುಗಳನ್ನು ಆ ಪ್ರದೇಶವು ಒಳಗೊಂಡಿತ್ತು. ಆ ಅರಸನು ಹೆಷ್ಬೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ಆ ನಾಯಕರಾಗಿದ್ದರು. (ಈ ನಾಯಕರೆಲ್ಲ ಸೀಹೋನನ ಜೊತೆ ಸೇರಿ ಯುದ್ಧಮಾಡಿದ್ದರು.) ಈ ನಾಯಕರೆಲ್ಲ ಅದೇ ದೇಶದಲ್ಲಿ ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
Kannada BSI Bible 2016
ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಟ್ಟಾರೆ ಮೀಶೋರೆಂಬ ಎತ್ತರವಾದ ಬೈಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ಸಮಸ್ತರಾಜ್ಯವೂ ಇವುಗಳೇ. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಹೊಡೆದುಹಾಕಿದನು.
Kannada Bible (KNCL) BSI 2016
ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲ ನಗರಗಳು, ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸ ಸೀಹೋನನ ಸಮಸ್ತ ರಾಜ್ಯ. ಮೋಶೆ ಈ ನಾಡಿನಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿದ್ದ ಅವನ ಸರದಾರರನ್ನೂ ಸದೆಬಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗೊಳಗಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಸೆದೆಬಡಿದನು.