Joshua 13:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪ್ರದೇಶವು ಬೇತ್‌ಹಾರಾಮ್, ಬೇತ್ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
Kannada BSI Bible 2016
ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ತಗ್ಗಿನಲ್ಲಿರುವ ಬೇತ್ಹಾರಾಮ್, ಬೇತ್ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ಪಟ್ಟಣಗಳು, ಕಿನ್ನೆರೆತ್ ಸಮುದ್ರದ [ದಕ್ಷಿಣದಿಕ್ಕಿನ] ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಯೊರ್ದನ್ ಪೂರ್ವಪ್ರದೇಶ ಇವುಗಳೇ.
Kannada Bible (KNCL) BSI 2016
ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.