Joshua 13:3 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,
Kannada BSI Bible 2016
ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;