Joshua 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಈ ಪ್ರದೇಶಗಳನ್ನೆಲ್ಲ ಆಯಾ ಕುಲಗಳಿಗೆ ಮೋವಾಬ್ ಬಯಲಿನಲ್ಲಿ ಇಳಿದುಕೊಂಡಿದ್ದಾಗ ಹಂಚಿಕೊಟ್ಟನು. ಮೋವಾಬ್ ಬಯಲು ಜೆರಿಕೊ ನಗರಕ್ಕೆ ಪೂರ್ವದಲ್ಲಿಯೂ ಜೋರ್ಡನ್ ನದಿಯ ಆಚೆದಡದಲ್ಲೂ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.
Kannada BSI Bible 2016
ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬೈಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟನು.
Kannada Bible (KNCL) BSI 2016
ಮೋಶೆ ಜೋರ್ಡನಿನ ಆಚೆ ಜೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲು ಪ್ರದೇಶದಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವಂತ ಆಸ್ತಿಯಾಗಿ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಮೋಶೆಯು ಯೊರ್ದನ್ ನದಿಗೆ ಆಚೆ ಯೆರಿಕೋವಿನ ಪೂರ್ವದಿಕ್ಕಿನಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಬಾಧ್ಯತೆಯಾಗಿ ಹಂಚಿದ ದೇಶಗಳು ಇವೆ.