Joshua 13:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.
Kannada BSI Bible 2016
ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಲೇವಿಯ ಕುಲಕ್ಕೆ ಮೋಶೆಯು ಸ್ವಾಸ್ತ್ಯವನ್ನು ಕೊಡಲಿಲ್ಲ. ಇಸ್ರಾಯೇಲ್‍ದೇವರಾದ ಯೆಹೋವನ ವಾಗ್ದಾನದಂತೆ ಆತನೇ ಅವರ ಸ್ವಾಸ್ತ್ಯವು.
Kannada Bible (KNCL) BSI 2016
ಆದರೆ ಲೇವಿಯ ಕುಲಕ್ಕೆ ಮೋಶೆ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನೇ ಅವರ ಸೊತ್ತೆಂದು ವಾಗ್ದಾನ ಮಾಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು.