Joshua 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
Kannada BSI Bible 2016
ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -
Kannada Bible (KNCL) BSI 2016
ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ: