Joshua 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
Kannada BSI Bible 2016
ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,
Kannada Bible (KNCL) BSI 2016
ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ ಮತ್ತು ಅದೇ ಕಣಿವೆಯಲ್ಲಿದ್ದ ಮತ್ತೊಂದು ನಗರ, ಇವುಗಳಿಂದ ದೀಬೋನಿನವರೆಗೆ ವಿಸ್ತರಿಸಿಕೊಂಡಿದ್ದ ಮೇದಬದ ತಪ್ಪಲ ನಾಡು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ